ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿಂಬಾಕಿ (ಬ್ಯಾಕ್‌ಲಾಗ್) ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಉಸ್ತುವಾರಿಗಾಗಿ ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಸಚಿವರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಚಿವ ಸಂಪುಟದ ಉಪಸಮಿತಿ ಸಭೆಯು ದಿನಾಂಕ:21-06-2022 ರಂದು ಜರುಗಿದ ಸಭೆಯಲ್ಲಿ ವಿವಿಧ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ/ ಪ್ರಧಾನ ಮುಖ್ಯ ಕಾರ್ಯದರ್ಶಿ/ ಕಾರ್ಯದರ್ಶಿಗಳಗೆ ಬ್ಯಾಕ್‌ಲಾಗ್ ಹುದ್ದೆಗಳನ್ನು ಪ್ರಥಮ ಆದ್ಯತೆಯ ಮೇರೆಗೆ ಭರ್ತಿ ಮಾಡುವಂತೆ ನಿರ್ದೇಶನ ನೀಡಲಾಗಿದೆ.
ಮುಂದುವರೆದು, ಸಮಾಜ ಕಲ್ಯಾಣ ಇಲಾಖೆಯಿಂದ ದಿನಾಂಕ: 25.02.2022, 01.04.2022, 19.04.2022, 17.06.2022, 14.07.2022, 29.07.2022, 22.08.2022, 16.09.2022 de ಎಲ್ಲಾ ಇಲಾಖೆಗಳಿಗೆ ಪತ್ರ ಬರೆದು ಪ್ರಥಮ ಆದ್ಯತೆಯ ಮೇರೆಗೆ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡುವಂತೆ ಸೂಚನೆ ನೀಡಲಾಗಿದೆ.
ಪ್ರತಿವಾರ ನಡೆಯುವ ಕರ್ನಾಟಕ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಬುಡಕಟ್ಟುಗಳ ಕಲ್ಯಾಣ ಸಮಿತಿ ಸಭೆಯಲ್ಲಿ ಸಂಬಂಧಪಟ್ಟ ನೇಮಕಾತಿ ಪ್ರಾಧಿಕಾರಗಳಿಗೆ ಬ್ಯಾಕ್‌ಲಾಗ್ ಹುದ್ದೆಗಳನ್ನು ಶೀಘ್ರವಾಗಿ ತುಂಬುವಂತೆ ನಿರ್ದೇಶನ ನೀಡಲಾಗುತ್ತಿದೆ.
ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮತ್ತು ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ ಇವರಿಂದ ಸಂಬಂಧಪಟ್ಟ ನೇಮಕಾತಿ ಪ್ರಾಧಿಕಾರಿಗಳಿಗೆ ಬ್ಯಾಕ್‌ಲಾಗ್ ಹುದ್ದೆಗಳನ್ನು ಪ್ರಥಮ ಆದ್ಯತೆಯ ಮೇರೆಗೆ ಭರ್ತಿ ಮಾಡುವಂತೆ ಆಗಿಂದಾಗ್ಗೆ ಸೂಚನೆಗಳನ್ನು ನೀಡಲಾಗಿದೆ.
👇 👇 👇 👇 👇 👇 👇 👇👇 👇
No comments:
Post a Comment